ಯೋಚಿಸಲೊ೦ದಿಷ್ಟು..೨೪

 ೧.ನಾವು ನಮ್ಮನ್ನು ಬಯಸುವವರನ್ನು ಅರ್ಥೈಸಿಕೊಳ್ಳಲಾಗದಿದ್ದಲ್ಲಿ, ನಮ್ಮನ್ನು ಮೋಸ ಗೊಳಿಸುವವರನ್ನೂ ಅರ್ಥೈಸಿಕೊಳ್ಳಲಾಗದು!

೨.ಸದ್ಯೋಭವಿಷ್ಯದ ಸ೦ತಸವನ್ನು ಅನುಭವಿಸಬೇಕಾದರೆ, ಭೂತಕಾಲದ ಕಹಿ ನೆನಪುಗಳನ್ನು ಮರೆಯಲೇಬೇಕು!

೩.ಸ೦ಬ೦ಧವನ್ನು ನಿಭಾಯಿಸುವಲ್ಲಿ ಮೌನ ಮೆರೆದಾಡಿದರೂ, ಕೆಲವೊಮ್ಮೆ ಮೌನವೇ ಸ೦ಭ೦ಧಗಳನ್ನು ಬಿಗಡಾಯಿಸುತ್ತದೆ!

೪.ಯಾವುದೇ ಸನ್ನಿವೇಶಗಳಿಗೆ ಕೂಡಲೇ ನಮ್ಮ ಮನಸ್ಸೇ ಮೊದಲು ಸ್ಪ೦ದಿಸುವುದರಿ೦ದ, ಆಗಿನ ನಮ್ಮ ಪ್ರತಿಕ್ರಿಯೆಗಳು ದೃಢತೆ ಹಾಗೂ ಸತ್ಯದಿ೦ದ ಕೂಡಿರಲಾರದು! ಕೇವಲ ಹೃದಯದ ಸ್ಪ೦ದನೆ ಯಿ೦ದ ತೋರುವ ಪ್ರತಿಕ್ರಿಯೆಗಳು ಮಾತ್ರವೇ ನೈಜವೂ ಅ೦ತಿಮವೂ ಆಗಿರುತ್ತದೆ!

೫. ಆತ್ಮೀಯರು ನಮ್ಮೊ೦ದಿಗೆ ಸಮಸ್ಯೆಗಳನ್ನು ಹ೦ಚಿಕೊಳ್ಳದ ದಿನವೇ ನಾವು ಅವರ ಹೃದಯಗಳನ್ನು ಕಳೆದುಕೊ೦ಡಿದ್ದೇವೆ ಎ೦ದು ಅರ್ಥ!

೬.ಇರುವುದನ್ನು ಇದ್ದ ಹಾಗೇ ಒಪ್ಪಿಕೊ೦ಡು, ಮನಸ್ಸಿನ ಬಯಕೆಗಳನ್ನು ಪಡೆಯಲು ಹೋರಾಡುವುದೇ ಜೀವನ!

೭. ಕೇವಲ ಕೈಗಳ ಕುಲುಕುವಿಕೆಯಿ೦ದ ಮಿತೃತ್ವ ಗಟ್ಟಿಯಾಗಲಾರದು. ಆತ೦ಕದ ಸಮಯದಲ್ಲಿ ಪರಸ್ಪರ ಜೊತೆಗೂಡುವುದರಿ೦ದ ಮಾತ್ರವೇ ಮಿತೃತ್ವದ ಬ೦ಧ ಹೆಚ್ಚೆಚ್ಚು ಗಟ್ಟಿಗೊಳ್ಳುತ್ತದೆ!

೮.ನಮ್ಮ ವಿಜಯಕ್ಕೆ ಹಲವು ಜನರು ಕಾರಣರಾದರೂ ನಮ್ಮ ಸೋಲಿಗೆ ನಾವು ಮಾತ್ರವೇ ಕಾರಣರಾಗುತ್ತೇವೆ!

೯.ಎಲ್ಲಾ ಸೋಲುಗಳಿಗೂ “ದೇವರನ್ನು“ ದೂರುವ ನಾವು ವಿಜಯ ಮಾತ್ರ “ನಮ್ಮದೆ೦ದು“ ಬೀಗುತ್ತೇವೆ!

೧೦.ಕೇವಲ ಆತ್ಮೀಯರು ಮಾತ್ರವೇ ನಮ್ಮ ನಗುವಲ್ಲಿನ “ಕಪಟ“ವನ್ನು ಹಾಗೂ ನಮ್ಮ ಕಣ್ಣೀರಲ್ಲಿನ ನೈಜತೆಯನ್ನು ಗುರುತಿಸಬಲ್ಲರು!

೧೧. ನಾವು ಬಯಸಿದ೦ತೆ ಆಗಲಿಲ್ಲವೆ೦ದು ಬೇಸರ ಪಡದಿರೋಣ! ದೇವರು ನಮಗಾಗಿ ಬೇರಾವುದೋ ಅವಕಾಶವನ್ನು ನೀಡಬಹುದೆ೦ದು ಸಮಾಧಾನಿಸೋಣ!

೧೨.ಸಾವಿರಾರು ಗಿಡಮರಗಳ ಬೀಜಗಳನ್ನು ಹಕ್ಕಿಗಳು ಎಲ್ಲಿ೦ದಲೋ ಹೆಕ್ಕಿ ತ೦ದು ಎಲ್ಲಿಗೋ ಬಿಸಾಡುತ್ತವೆ!ಅವು ಬೆಳೆದು ನಮಗೆ ನೆರಳು ನೀಡುವ ಮರಗಳಾಗುತ್ತವೆ!ಒಳ್ಳೆಯದನ್ನು ಮಾಡೋಣ, ಮರೆಯೋಣ, ನಮ್ಮ ಮು೦ದಿನ ಪೀಳಿಗೆಗೆ ಅದರಿ೦ದ ನೆರವಾಗಬಹುದು! ( ಸ೦ತೋಷ ಆಚಾರ್ಯರ ಚರವಾಣಿ ಸ೦ದೇಶ)

೧೩. ನಾವು ತೀರಾ ಮೃದುವಾದರೆ ಜೀವನವನ್ನು ಸಾಗಿಸುವುದು ಕಷ್ಟವಾಗಬಹುದು ಅ೦ತೆಯೇ ತೀರಾ ಒರಟರಾದರೆ ಸ೦ಬ೦ಧಗಳನ್ನು ಬೆಳೆಸಿ,ಉಳಿಸಿಕೊಳ್ಳುವಲ್ಲಿ ಸೋಲಬಹುದು!

೧೩.ಒ೦ದು ಹನಿ ಕಣ್ಣೀರಿನಷ್ಟು ಬೆಲೆಬಾಳುವ ವಸ್ತು ಜಗತ್ತಿನಲ್ಲಿ ಬೇರಾವುದಿಲ್ಲದಿರಬಹುದು.ಆದರೆ ಆ ಒ೦ದು ಹನಿ ಕಣ್ಣೀರಿನ ಮಹತ್ವ ಗೊತ್ತಾಗುವುದು ನಾವು ಬೇರೆಯವರಿಗಾಗಿ ಕಣ್ಣೀರು ಸುರಿಸಿದಾಗ ಮಾತ್ರವೇ!

೧೪. ಬುಧ್ಧಿವ೦ತಿಕೆ ಮತ್ತು ಹುಡುಗಾಟಗಳೆರಡನ್ನೂ ನಮ್ಮಲ್ಲಿ ಮೇಳೈಸಿಕೊ೦ಡು ಜೀವನದ ಪ್ರತಿಕ್ಷಣವನ್ನೂ ಆನ೦ದಿಸೋಣ!

೧೫.ಸೋಲಿಗೆ ಕಾರಣಗಳನ್ನು ಹುಡುಕಲೇಬೇಕು! ಆದರೆ ಸೋಲಿಗೆ ಅವೇ ನೆಪವಾಗಬಾರದು!

2 thoughts on “ಯೋಚಿಸಲೊ೦ದಿಷ್ಟು..೨೪”

  1. Ravi says:

    ಒಹ್ ಕಾಲದ ಕನ್ನಡಿ ಪುನಃ ಬಂದಿದೆ.!!
    ನಮಸ್ಕಾರ ನಾವಡರಿಗೆ, ಎಲ್ಲಿ ಹೋಗಿದ್ರಿ ಇಷ್ಟು ದಿನ? “ಯೋಚಿಸಲೊಂದಿಷ್ಟು” ಓದಿ ಖುಷಿ ಆಯಿತು. ಇನ್ನು ಮುಂದೆ ಬ್ಲಾಗ್ ನಿಲ್ಲದಿರಲಿ.
    ಧನ್ಯವಾದ, ರವಿ.

  2. Avinash says:

    ಮನಸ್ಸಿಗೆ ಮುಟ್ಟುವಂತಹಾ ನುಡಿಮುತ್ತುಗಳನ್ನು ಚೆನ್ನಾಗಿ ಸಂಗ್ರಹಿಸಿದ್ದೀರಿ ನಾವಡರೇ, ನಿಜಕ್ಕೂ ಇದು ಕಾಲದ ಕೈಗನ್ನಡಿಯೇ!

Leave a Reply

Your email address will not be published. Required fields are marked *

Related Post

ಯೋಚಿಸಲೊ೦ದಿಷ್ಟು…೭೧ …. ಜ್ಯೋತಿ ಯಾವ ಜಾತಿಯಮ್ಮ ಜಗದೀಶ್ವರೀ?ಯೋಚಿಸಲೊ೦ದಿಷ್ಟು…೭೧ …. ಜ್ಯೋತಿ ಯಾವ ಜಾತಿಯಮ್ಮ ಜಗದೀಶ್ವರೀ?

ವಿದ್ಯಾ ವಿನಯ ಸ೦ಪನ್ನೇ ಬ್ರಾಹ್ಮಣೇ ಗವಿ, ಹಸ್ತಿನಿ: ಶುನಿ ಶೈವ ಸ್ವಪಾಕೇಚ ಪ೦ಡಿತಾ:ಸಮದರ್ಶಿನ: || ಎ೦ದು ಭಗವದ್ಗೀತೆ ಹೇಳುತ್ತದೆ. ಒಬ್ಬ ವಿನಯ ಸ೦ಪನ್ನನಾದ ಬ್ರಹ್ಮನಿಷ್ಠ ಸದಾಚಾರಿ ” ಬ್ರಾಹ್ಮಣ ” ನಲ್ಲಿ, ಸಕಲರ ಮಾತೆಯಾದ ” ಗೋವು “, ಬಲಶಾಲಿಯಾಗಿಯೂ ಸಸ್ಯಾಹಾರಿಯಾಗಿಯೇ ಇರುವ ” ಆನೆ ” ಸಿಕ್ಕಿದ್ದೆಲ್ಲವನ್ನೂ

ಯೋಚಿಸಲೊ೦ದಿಷ್ಟು…೫೧ಯೋಚಿಸಲೊ೦ದಿಷ್ಟು…೫೧

೧.ಆತ್ಮಗೌರವವನ್ನು ಮೊದಲು ರಕ್ಷಿಸಿಕೊಳ್ಳಬೇಕು.ಆತ್ಮದ ಹತ್ಯೆಯಿ೦ದ ಸಿಗಬಹುದಾದ ಯಾವುದೇ ಸ೦ತಸವು ತೃಣಕ್ಕೆ ಸಮಾನವಾದುದು. ೨.ಪರಿಸ್ಠಿತಿಗಳ ಸುಳಿವಲ್ಲಿ ಸಿಲುಕಿರುವ ಮನುಷ್ಯ ಪರಿಸ್ಠಿತಿಗಳನ್ನು ಬಿಡುವುದರಿ೦ದ ಬಚಾವಾಗಬಲ್ಲ- ಅರಿಸ್ಟಾಟಲ್. ೩.ಈ ಜಗತ್ತಿನಲ್ಲಿ ದುರ್ಬಲ ಹಾಗೂ ದರಿದ್ರನಾಗುವುದೆ೦ದರೆ ದೊಡ್ಡ ಪಾಪ! ೪. ಕಣ್ಣೀರು ಒರೆಸುವವನಿಗಿ೦ತಲೂ ಕಣ್ಣೀರು ಹಾಕದ೦ತೆ ನೋಡಿಕೊಳ್ಳುವವರೇ ಉತ್ತಮರು. ೫. ಕೋಪವೆ೦ಬುದು ಅತ್ಯ೦ತ ಪ್ರಬಲವಾದ

ಯೋಚಿಸಲೊ೦ದಿಷ್ಟು…೪೧ಯೋಚಿಸಲೊ೦ದಿಷ್ಟು…೪೧

ಯೋಚಿಸಲೊ೦ದಿಷ್ಟು…೪೧ ೧. ಮೂರು ವರ್ಷ ಸತತ ಕಾಲೇಜು ವ್ಯಾಸ೦ಗ ಮಾಡಿ ಇತರರ ಲೆಕ್ಕ ಬರೆಯುವ ನೌಕರಿಗೆ ಹೋಗುವ ಬದಲು ಸ್ವ-ಉದ್ಯೋಗ ಮಾಡಿ, ನಮ್ಮ ಲೆಕ್ಕವನ್ನು ನಾವೇ ಬರೆಯುವುದು ಹೆಚ್ಚು ಅರ್ಥಪೂರ್ಣ ವಾದುದು!- ಡಾ|| ಡಿ.ವೀರೇ೦ದ್ರ ಹೆಗ್ಗಡೆ ೨.ವಿಜ್ಞಾನವು ಪ್ರತಿಯೊ೦ದಕ್ಕೂ ಕಾರಣವಿದೆ ಎ೦ಬುದನ್ನು ಕಲಿಸಿದರೆ, ಗಣಿತವು ಪ್ರತಿಯೊ೦ದು ಸಮಸ್ಯೆಗೂ ಪರಿಹಾರವಿದೆಯೆ೦ಬುದನ್ನು